ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕದಿಂದ ಯಾರಿಗೂ ಅಸಮಾಧಾನವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ಮಾಡಿದ್ದಕ್ಕೆ ಯಾರಿಗೂ ಅಸಮಾಧಾನವಿಲ್ಲ. ಬಿವೈ ವಿಜಯೇಂದ್ರ ಎಲ್ಲರನ್ನೂ ಭೇಟಿಯಾಗುತ್ತಿದ್ದಾರೆ. ಭಿನ್ನಾಭಿಪ್ರಾಯ ಇದ್ದರೆ ಎಲ್ಲರೂ ಮಾತನಾಡಿ ಸರಿ ಮಾಡುತ್ತೇವೆ ಎಂದರು.
ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ನಾವು ಎಲ್ಲರೂ ಸೇರಿ ಸರಿ ಮಾಡುತ್ತೇವೆ. ಪಕ್ಷದ ಮೇಲೆ ಜನರಿಗೆ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.