ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮನೆ ದೀಪಾವಳಿ ಅಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವ್ಯಾಪಕ ಸುದ್ದಿಯಾಗುತ್ತಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಕರೆಂಟ್ ಕದ್ದಿರುವ ಬಗ್ಗೆ ನನಗೆ ಗೊತ್ತಿಲ್ಲ , ತಿಳಿದುಕೊಂಡು ಹೇಳುತ್ತೇನೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಇನ್ನೂ, ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಈ ಬಗ್ಗೆ ನನಗೂ ಮಾಹಿತಿ ಬಂದಿದೆ. ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ತಪ್ಪು ಯಾರೇ ಮಾಡಿದರೂ ಅದು ತಪ್ಪು, ನನಗೂ ಈ ಬಗ್ಗೆ ಮಾಹಿತಿ ಬಂದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಹಾಗೂ , ಅಚಾತುರ್ಯಕ್ಕೆ ನನ್ನ ವಿಷಾದವಿದೆ, ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.