HomeEntertainmentಹುಲಿ ಉಗುರು ಬಳಿಕ ಮತ್ತೊಂದು ವಿವಾದದಲ್ಲಿ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್

ಹುಲಿ ಉಗುರು ಬಳಿಕ ಮತ್ತೊಂದು ವಿವಾದದಲ್ಲಿ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್

ಬೆಂಗಳೂರು: ಹುಲಿ ಉಗುರು ಪ್ರಕರಣದ ನಂತರ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರ್ ಸಂತೋಷ್ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಸಂತೋಷ್ ಮದುವೆ ವಿಚಾರದಲ್ಲಿ ವಿವಾದ ಉಂಟಾಗಿದೆ.

ಮದುವೆ ಆಗಿರುವುದನ್ನು ಅವರು ಮುಚ್ಚಿಟ್ಟಿದ್ದಾರೆ. ಕೊರೋನಾ ಸಂದರ್ಭದಲ್ಲಿ ವರ್ತೂರು ಸಂತೋಷ್ ಗೆ ಮದುವೆಯಾಗಿತ್ತು. ದಂಪತಿಗೆ ಒಂದು ಹೆಣ್ಣು ಮಗು ಸಹ ಜನಿಸಿತ್ತು. ಮಾರ್ಚ್ 5, 2020 ರಂದು ವರ್ತೂರು ಸಂತೋಷ್ ಗೆ ಮದುವೆಯಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ವರ್ತೂರು ಸಂತೋಷ್ ಮತ್ತು ಪತ್ನಿ ಪ್ರತ್ಯೇಕವಾಗಿದ್ದರು. ಬಿಗ್ ಬಾಸ್ ಮನೆಯಲ್ಲಿಯೂ ಮದುವೆ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. ಪತ್ನಿಗೆ ಅವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಅವರಿಗೆ ಈಗಾಗಲೇ ಮದುವೆಯಾಗಿದೆ. ನನ್ನ ಮಗಳನ್ನು ಮದುವೆಯಾಗಿ ಮೋಸ ಮಾಡಿದ್ದಾರೆ. ಮದುವೆಯಾದ ಮೇಲೆ ಮಗಳಿಗೆ ಹೊಡೆಯುತ್ತಿದ್ದ. ಮಗಳು ತವರಿಗೆ ಬಂದು ಎರಡು ವರ್ಷವಾಯಿತು. ಹೊಸಕೋಟೆ ಬಳಿಯ ಕೆಎಂಎಂ ರಾಯಲ್ ನಲ್ಲಿ ಮದುವೆಯಾಗಿದೆ ಎಂದು ಸಂತೋಷ್ ಮಾವ ಸೋಮನಾಥ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular