
ಕರಾಚಿ : ಪಾಕಿಸ್ತಾನದಲ್ಲಿ ಇಂದು ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ದೇಶದ ಅನೇಕ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.2ರಷ್ಟಿತ್ತು.
ಈ ಕುರಿತಂತೆ ಎಕ್ಸ್ ನಲ್ಲಿ ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದ್ದು, ಪಾಕಿಸ್ತಾನದಲ್ಲಿ ಇಂದು ಬೆಳಿಗ್ಗೆ 5:35 ಕ್ಕೆ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ. ಭೂಕಂಪನದಿಂದ ಹಾನಿಯಾಗಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.