HomeKarnatakaB.Y ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ : ಮಾಜಿ ಸಿಎಂ ಬೊಮ್ಮಾಯಿ

B.Y ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಬಿ.ವೈ ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯೇಂದ್ರ ಪದಗ್ರಹಣದ ವೇಳೆ ಮಾತನಾಡಿದ ಅವರು ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು. ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು.

ನಂತರ ಮಾತನಾಡಿದ ಬಿ.ವೈ ವಿಜಯೇಂದ್ರ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಮಾಡದಂತೆ ಪಕ್ಷ ಸಂಘಟನೆ ಮಾಡುವೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular