alex Certify ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ  ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳ ದಾಖಲೆಗಳ ನೈಜತೆಯ ಪರಿಶೀಲನಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಲಾಗಿದೆ.

ಪದವೀಧರ  ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ (GPTR-2022) ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದ ತೀರ್ಪು ಹಾಗೂ ಸರ್ಕಾರದ ಆದೇಶದಂತೆ D06:08/03/20230 ಮುಖ್ಯ ಆಯ್ಕೆಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ಥಳನಿಯುಕ್ತಿ ಕೌನ್ಸಿಲಿಂಗ್‌ನ್ನು ನಡೆಸಲಾಗಿದೆ. ಆದರೆ ದಾಖಲೆಗಳ ನೈಜತೆ ಪರಿಶೀಲನೆ ಹಾಗೂ ಜಾತಿ, ಆದಾಯ ಪ್ರಮಾಣ ಪತ್ರದ ಸಿಂಧುತ್ವ ಕಾರ್ಯ ಕಾಲಮಿತಿಯಲ್ಲಿ ಪೂರ್ಣಗೊಳ್ಳದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ನೀಡದಿರುವುದನ್ನು ಗಮನಿಸಲಾಗಿದೆ.

ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ರವರು ಅಭ್ಯರ್ಥಿಗಳ ದಾಖಲೆಗಳ ನೈಜತೆ ಪರಿಶೀಲನೆ ಹಾಗೂ ಜಾತಿ ಆದಾಯ ಪ್ರಮಾಣ ಪತ್ರದ ಸಿಂದುತ್ವ ಕಾರ್ಯಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಕಳುಹಿಸುವಂತೆ ಉಲ್ಲೇಖಿತ ಪತ್ರಗಳಲ್ಲಿ ತಿಳಿಸಲಾಗಿತ್ತು. ಅಂತೆಯೇ  ಈ ಬಗ್ಗೆ ವಿಡಿಯೋ ಕಾನ್ಸರೆನ್ಸ್ ಹಾಗೂ ದೂರವಾಣಿ, ಇ-ಮೇಲ್ ಮೂಲಕ ಪದೇ ಪದೇ ತಿಳಿಸಿದಾಗ್ಯೂ ಸಹ ದಾಖಲೆಗಳ ನೈಜತೆ ಹಾಗೂ ಜಾತಿ, ಆದಾಯ ಪ್ರಮಾಣ ಪತ್ರದ ಸಿಂಧುತ್ವ ಕಾರ್ಯದಲ್ಲಿ ನಿರೀಕ್ಷಿತ ಪ್ರಗತಿ ಆಗದಿರುವುದು ತಮ್ಮ ಕಛೇರಿಯಿಂದ ಸಲ್ಲಿಸಿರುವ ಅಂಕಿ ಅಂಶಗಳಿಂದ ಕಂಡುಬಂದಿರುತ್ತದೆ.

ಆಯಾ  ಜಿಲ್ಲಾ ನೇಮಕಾತಿ ಪ್ರಾಧಿಕಾರವಾದ ಉಪನಿರ್ದೇಶಕರು (ಆಡಳಿತ) ರವರು ಈ ಬಗ್ಗೆ ವೈಯಕ್ತಿಕ ಗಮನ ಹರಿಸಿ, ಬಾಕಿ ಇರುವ ದಾಖಲೆಗಳ ನೈಜತೆ ಪರಿಶೀಲನೆ ಹಾಗೂ ಜಾತಿ, ಆದಾಯ ಪ್ರಮಾಣ ಪತ್ರದ ಸಿಂಧುತ್ವ ಕಾರ್ಯದ ಅನುಪಾಲನೆಯ ಜೊತೆಗೆ ತಮ್ಮ ಜಿಲ್ಲೆಯ ವಿವಿಧ ಪ್ರಾಧಿಕಾರಗಳಲ್ಲಿ ಬಾಕಿ ಇರುವ ಇತರೆ ಜಿಲ್ಲೆಗಳ ಪ್ರಮಾಣ ಪತ್ರಗಳ ನೈಜತೆ ಕಾರ್ಯದ ಬಗ್ಗೆಯೂ ಪ್ರತಿನಿತ್ಯ ಅನುಪಾಲನೆ ಮಾಡಿ ಸಂಬಂಧಪಟ್ಟ ಜಿಲ್ಲೆಗಳಿಗೆ ವರದಿ ರವಾನೆ ಆಗುವಂತೆ ನೋಡಿಕೊಳ್ಳುವುದು.

ಎಲ್ಲಾ  ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ) ರವರು ತಮ್ಮ ಜಿಲ್ಲೆಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಸಿಂಧುತ್ವ ಹಾಗೂ ನೈಜತೆ ಪರಿಶೀಲನೆಗಾಗಿ ಕಳುಹಿಸಿರುವ ಹಾಗೂ ಬಾಕಿ ಇರುವ ವಿವರಗಳನ್ನು ಆಯಾ ಜಿಲ್ಲೆಯ ಉಪನಿರ್ದೇಶಕರು(ಆಡಳಿತ) ರವರೊಂದಿಗೆ ಮಾಹಿತಿ ಹಂಚಿಕೊಳ್ಳಲು ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...