ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದೆ. ಬೀದಿ ನಾಯಿಗಳ ಗುಂಪೊಂದು 6 ವರ್ಷದ ಬಾಲಕನ ಮೇಲೆ ದಾಳಿ ನಡೆಸಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
ದಕ್ಷ್ ಎಂಬ 6 ವರ್ಷದ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಯಲ್ಲಿ ಮಗುವಿನ ಕುತ್ತಿಗೆಗೆ ಆಳವಾದ ಗಾಯಗಳಾಗಿದ್ದು, ಅದು ಅವನ ಸಾವಿಗೆ ಕಾರಣವಾಯಿತು. ಘಟನೆಯ ನಂತರ, ಶೇರ್ಘರ್ ಪ್ರದೇಶದಲ್ಲಿ ಭೀತಿ ಉಂಟಾಗಿದ್ದು, ಸ್ಥಳೀಯ ನಿವಾಸಿಗಳು ಆಕ್ರೋಶಗೊಂಡಿದ್ದಾರೆ.
ಶೇರ್ಘರ್ನಲ್ಲಿ, ಛೇದಲಾಲ್ ಅವರ 6 ವರ್ಷದ ಮಗ ದಕ್ಷ್ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್ಸಿ) ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದನು. ಅಲ್ಲಿ ಬೀದಿ ನಾಯಿಗಳ ಗುಂಪು ದಕ್ಷ್ ಮೇಲೆ ದಾಳಿ ಮಾಡಿತು. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ನಾಯಿಗಳು ಹುಡುಗನ ಮೇಲೆ ದಾಳಿ ಮಾಡಿದೆ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ.