ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತ ದಾಖಲಿಸಿದೆ.
50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿದೆ. ನ್ಯೂಜಿಲೆಂಡ್ ಗೆಲುವಿಗೆ 398 ರನ್ ಗೆಲುವಿನ ಗುರಿ ನೀಡಿದೆ.
ಭಾರತದ ಪರ ರೋಹಿತ್ ಶರ್ಮಾ 47, ಶುಭಮನ್ ಗಿಲ್ ಅಜೇಯ 80, ವಿರಾಟ್ ಕೊಹ್ಲಿ 117, ಶ್ರೇಯಸ್ ಅಯ್ಯರ್ 105, ಕೆ.ಎಲ್. ರಾಹುಲ್ ಅಜೇಯ 39 ರನ್ ಗಳಿಸಿದ್ದಾರೆ.
ನ್ಯೂಜಿಲೆಂಡ್ ಪರ ಟೀಮ್ ಸೋಥಿ 3 ವಿಕೆಟ್ ಪಡೆದಿದ್ದಾರೆ.
ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್ ನಲ್ಲಿ ಐದನೇ ಶತಕ ದಾಖಲಿಸಿದ್ದಾರೆ. 67 ಎಸೆತಗಳಲ್ಲಿ ಅವರು ಶತಕ ಸಿಡಿಸಿದ್ದಾರೆ.
ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ 50ನೇ ಶತಕ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 50 ಶತಕ ಗಳಿಸಿದ ಮೊದಲ ಬ್ಯಾಟರ್ ಆಗಿದ್ದಾರೆ. ಸಚಿನ್ ತೆಂಡೂಲ್ಕರ್ 49 ಶತಕ ಗಳಿಸಿದ್ದಾರೆ.
Innings Break!
A stellar batting display by #TeamIndia as we set a target of 398 in Semi-Final 1! 🙌
Over to our bowlers 💪
Scorecard ▶️ https://t.co/FnuIu53xGu#CWC23 | #MenInBlue | #INDvNZ pic.twitter.com/R4CKq3u16m
— BCCI (@BCCI) November 15, 2023


