ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಈಗಾಗಲೇ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರ ಅಧಿಸೂಚನೆ ಹೊರ ಬೀಳಲಿದೆ. ಹುದ್ದೆ ಖಾಲಿ ಇರುವುದರಿಂದ ಹಾಲಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡವೂ ಹೆಚ್ಚಾಗಿದೆ. ಹುದ್ದೆ ಭರ್ತಿಯಾದರೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನವೆಂಬರ್ ಅಂತ್ಯಕ್ಕೆ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದ್ದು, ಆರ್ ಡಿಪಿಆರ್ ಇಲಾಖೆಯ ವಿವಿಧ ವೃಂಧಗಳ ನೇರನೇಮಕಾತಿ ಮೂಲಕ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರೇಡ್ 1 ಮತ್ತು ಗ್ರೇಡ್ 2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆ ಸೇರಿ ಒಟ್ಟು 733 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.