HomeBusinessಫೆ. 17 ರೊಳಗೆ ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

ಫೆ. 17 ರೊಳಗೆ ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

ದಾವಣಗೆರೆ: 2019ರ  ಏಪ್ರಿಲ್ 1ಕ್ಕಿಂತ  ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಬುಧವಾರ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ 6,16,353 ಖಾಸಗಿ ಹಾಗೂ ಸರ್ಕಾರಿ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಬೇಕಾಗಿದೆ. ಇದರಿಂದ ಅಪರಾಧಿಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸುವ ನಕಲಿ ನೋಂದಣಿ ಸಂಖ್ಯೆಗಳನ್ನು ತಡೆಗಟ್ಟಬಹುದು ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ ಎಂದರು.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್‍ಲೈನ್ ವೆಬ್‍ಸೈಟ್ www.siam.in hsrp karnataka book my hsrp -book my hsrp ಗೆ ಭೇಟಿ ನೀಡಿ ನೋಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು.

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೆ.ಎಸ್.ಆರ್.ಟಿ.ಸಿ ಡಿ.ಸಿ ಶ್ರೀನಿವಾಸ್ ಮಾತಾನಾಡಿ, ದಾವಣಗೆರೆ ಘಟಕದ 56 ಕೆ.ಎಸ್.ಆರ್.ಟಿ ಸಿ  ಬಸ್ ಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲಾಗಿದ್ದು, ಬಾಕಿಯಿರುವ 323 ಸರ್ಕಾರಿ ಸಾರಿಗೆ ಬಸ್ ಗಳಿಗೆ ಶೀಘ್ರವೇ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಮಾಲೀಕರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್‍ಕುಮಾರ್ ಸಂತೋಷ್, ಆರ್.ಟಿ.ಒ ಪ್ರಮತೇಶ  ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular