`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಮೊದಲ ಬಾರಿಗೆ ಸಾರಿಗೆ ಬಸ್ ಗಳಲ್ಲಿ `UPI’ ಪಾವತಿ ವ್ಯವಸ್ಥೆ ಯಶಸ್ವಿ

 

ಹುಬ್ಬಳ್ಳಿ :  ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ, ರಾಜ್ಯದಲ್ಲಿ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿಯುಪಿಐ ಪಾವತಿ ವ್ಯವಸ್ಥೆ ಯಶಸ್ವಿಯಾಗಿದೆ.

ಸಾರಿಗೆ  ಬಸ್ ಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಮೂಲಕ ಚಿಲ್ಲರೆ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದ್ದು,  ಫೋನ್ ಪೇ ಕಂಪನಿಯ ಸಹಯೋಗದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಆರಂಭಿಸಲಾಗಿತ್ತು.  ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಸೇರಿದಂತೆ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಚಿಲ್ಲರೆ ಸಮಸ್ಯೆ ಪರಿಹಾರ, ನಗದು ರಹಿತ ಪ್ರಯಾಣ ಮತ್ತಿತರ ಪ್ರಯೋಜನಗಳಿಂದಾಗಿ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಹಾಗೂ ಸಿಬ್ಬಂದಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಶೀಘ್ರವಾಗಿ ಸಂಸ್ಥೆಯ ಎಲ್ಲಾ 4581 ಬಸ್‌ಗಳಲ್ಲಿ ಈ ವ್ಯವಸ್ಥೆಯನ್ನು ವಿಸ್ತರಿಸಲಾಗುತ್ತದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read