HomeKarnatakaಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : `ಬಗರ್ ಹುಕುಂ' ಅರ್ಜಿ ವಿಲೇವಾರಿಗೆ...

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : `ಬಗರ್ ಹುಕುಂ’ ಅರ್ಜಿ ವಿಲೇವಾರಿಗೆ `ಆ್ಯಪ್’ ಬಿಡುಗಡೆ

ಬೆಂಗಳೂರು : ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿಗೆ ಆಯಪ್ ಸಿದ್ದಪಡಿಸುತ್ತಿದ್ದು, ಆಯಪ್ ಮೂಲಕವೇ ಅರ್ಜಿ ವಿಲೇವಾರಿ ಮಾಡಿ ನಂತರ ಅರ್ಹ ಫಲಾನುಭವಿಗಳಿಗೆ ಇ- ಸಾಗುವಳಿ ಚೀಟಿ ಒದಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ  ನಮೂನೆ 50, 53, 57 ರಲ್ಲಿ ಅಕ್ರಮ- ಸಕ್ರಮ ಯೋಜನೆ ಅಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು.ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಸಾಗುವಳಿ ಚೀಟಿ ನೀಡುವುದು ಅಸಾಧ್ಯ ಎಂದು ತಿಳಿಸಿದ್ದಾರೆ.

ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಅಧಿಕಾರಿಗಳು ಬಗರ್ ಹುಕುಂ ತಂತ್ರಾಂಶದ ಮೂಲಕ ಕೃಷಿ ಚಟುವಟಿಕೆ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು.  ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಬೇರೆ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದ್ದಾರೆ.

ಬಗರ್  ಹುಕುಂ ಅರ್ಜಿಗಳ ಪೈಕಿ ಅರ್ಹ ರೈತರಿಗೆ ಮುಂದಿನ ಆರು ತಿಂಗಳ ಒಳಗೆ ಸಾಗುವಳಿ ಚೀಟಿ ಕೊಡಬೇಕು. ಕೃಷಿ ಜಮೀನುಗಳಿಗೆ ತೆರಳಲು ರಸ್ತೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular