ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ‘ರಾಗಿ ಮಾಲ್ಟ್ ಭಾಗ್ಯ’ ಜಾರಿಗೆ ತರಲು ನಿರ್ಧರಿಸಿದೆ.
ಹೌದು, ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ‘ ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಬಿಸಿಯೂಟ ಯೋಜನೆ ಬಹಳ ಚೆನ್ನಾಗಿ ನಡೆಯುತ್ತಿದೆ. ಇದರ ಜೊತೆ ಮಧ್ಯಾಹ್ನದ ಬಿಸಿಯೂಟಕ್ಕೆ ರಾಗಿ ಮಾಲ್ಟ್ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಮುಂದಿನ ತಿಂಗಳು ರಾಗಿ ಮಾಲ್ಟ್ ಯೋಜನೆಗೆ ಚಾಲನೆ ಸಿಗಲಿದೆ, ಇದರಿಂದ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ ಸಿಕ್ಕಂತಾಗುತ್ತದೆ ಎಂದರು. ಈ ಮೊದಲು ಒಂದು ಎನ್ ಜಿ ಒ ದವರು 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು, ಅದು ಈಗ ಯಶಸ್ವಿಯಾಗಿದೆ. ಆದ್ದರಿಂದ ಇದನ್ನು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು.
ಮುಂದುವರೆದು ಮಾತನಾಡಿದ ಸಚಿವರು ರಾಜ್ಯದಲ್ಲಿ SEP ಅನುಷ್ಠಾನ ಆಗಲಿದೆ, ಈ ಬಗ್ಗೆ ಮೊದಲ ಸಭೆ ಆಗಿದೆ. ಎಸ್ಇಪಿ ಜಾರಿ ಮೂಲಕ ಉತ್ತಮ ಶಿಕ್ಷಣ ವ್ಯವಸ್ಥೆ ನಿರ್ಮಾಣ ಆಗಲಿದೆ ಎಂದರು.