ಬೆಂಗಳೂರು: ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ ನೀಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ.
ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆ ಪಿಐ ಬಸವರಾಜು ಅವರನ್ನು ಅಮಾನತು ಮಾಡಲಾಗಿದೆ. ಮೂರು ತಿಂಗಳ ಹಿಂದೆ ಬಸವರಾಜ್ ಈ ಠಾಣೆಗೆ ಬಂದಿದ್ದರು. ಅವರು ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ಪಟಾಕಿ ಅಂಗಡಿಗೆ ಅನುಮತಿ ನೀಡಿದ್ದರು. ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ ನೀಡಿದ ಹಿನ್ನಲೆ ಅವರನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.