ಬೆಂಗಳೂರು: ರಾಜ್ಯದ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮ ತಡೆಯುವ ಉದ್ದೇಶದಿಂದ ಸರ್ಕಾರ ಪ್ರತ್ಯೇಕ ಕಾಯ್ದೆ ಜಾರಿಗೆ ತರಲು ನಿರ್ಧರಿಸಿದೆ
ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ ವಿಧೇಯಕ 2023(ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ಮುಂದಿನ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ, ಇಂಜಿನಿಯರ್ ನೇಮಕಾತಿ ಪರೀಕ್ಷೆ, ನಿಗಮ -ಮಂಡಳಿಗಳ ಎಫ್.ಡಿ.ಎ. ನೇಮಕಾತಿ ಸೇರಿದಂತೆ ಅನೇಕ ನೇಮಕಾತಿ ಪರೀಕ್ಷಾ ಅಕ್ರಮಗಳು ನಡೆದಿದೆ. ಇದರಿಂದ ಅರ್ಹರು ಅವಕಾಶ ವಂಚಿತರಾಗುತ್ತಿದ್ದಾರೆ. ಅಕ್ರಮದಲ್ಲಿ ಭಾಗಿಯಾದವರು ಶಿಕ್ಷೆಯಿಂದ ಪಾರಾಗುವುದನ್ನು ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೆ ತೀರ್ಮಾನಿಸಲಾಗಿದೆ.