HomeKarnatakaರೈತರೇ ಗಮನಿಸಿ : ಸಾಗುವಳಿ ಜಮೀನು ವಿವರ `ಫ್ರೂಟ್ಸ್' ತಂತ್ರಾಂಶದಲ್ಲಿ ನೋಂದಾಯಿಸಿ

ರೈತರೇ ಗಮನಿಸಿ : ಸಾಗುವಳಿ ಜಮೀನು ವಿವರ `ಫ್ರೂಟ್ಸ್’ ತಂತ್ರಾಂಶದಲ್ಲಿ ನೋಂದಾಯಿಸಿ

ರಾಜ್ಯ  ಸರ್ಕಾರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳಡಿ ಜಿಲ್ಲೆಯ ರೈತರು ವಿವಿಧ ಸೌಲಭ್ಯಗಳನ್ನು ಪಡೆಯಲು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ರೈತರ ಹಿತದೃಷ್ಠಿಯಿಂದ NIC ಸಹಯೋಗದೊಂದಿಗೆ FRUITS (Farmer Registration and Unified Beneficiary Information System) ಎಂಬ ಸಾಫ್ಟ್‍ವೇರ್ ಅಪ್ಲಿಕೇಷನ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ರೈತರು  ಕೃಷಿ ಅಥವಾ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು, ರೇಷ್ಮೆ, ಡೈರಿ, ಪೌಲ್ಟ್ರಿ, ಮೀನುಗಾರಿಕೆ ಮುಂತಾದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಭಿನ್ನ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ, ಪ್ರತಿಯೊಂದು ಚಟುವಟಿಕೆಗೆ ವಿಭಿನ್ನ ಜ್ಞಾನ ಮತ್ತು ಅನುಭವದ ಅಗತ್ಯತೆ ಇರುತ್ತದೆ.

ಫ್ರೂಟ್ಸ್  ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ, ಬೆಳೆ ವಿಮೆ, ಬೆಳೆ ಪರಿಹಾರ ಮತ್ತು ಇನ್ನಿತರ ಯೋಜನೆಗಳಿಗೆ ಲಿಂಕ್ ಮಾಡಲಾಗಿರುತ್ತದೆ. ಆದ್ದರಿಂದ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸೇರಿಸಲು ಪಹಣಿ ಪತ್ರ ಮತ್ತು ಆಧಾರ್ ಸಂಖ್ಯೆ ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾದ ಬ್ಯಾಂಕ್ ಖಾತೆ ಮಾಹಿತಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ  ಹತ್ತಿರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular