HomeKarnatakaBIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ...

BIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದ್ದ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸುಮಾರು ಆರು ತಿಂಗಳಿಂದ ಬಾಕಿ ಉಳಿದಿರುವ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ.ಹೈಕಮಾಂಡ್ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ಇರಲಿದ್ದು, ಇಂದೇ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.

ಶಾಸಕರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರ ಹೆಸರುಗಳು ವಿಪಕ್ಷ ನಾಯಕನ ಹುದ್ದಗೆ ಕೇಳಿಬರುತ್ತಿದ್ದು, ಇಂದು ಈ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ. ಶಾಸಕರ ಸಮ್ಮುಖದಲ್ಲಿ ವಿಪಕ್ಷ ನಾಯಕರ ಘೋಷಣೆ ನಿರೀಕ್ಷೆಯಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular