
ಬೆಂಗಳೂರು: ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ವಂಚಕರು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ಉತ್ತರ ಪ್ರದೇಶ ಮೂಲದವರು ಎಂದು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದಾರೆ. ನಕಲಿ ಫೇಸ್ ಬುಕ್ ಅಕೌಂಟ್ ನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ವಂಚಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.