ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.
ಇಲ್ಲಿಯವರೆಗೆ 1.9 ಕೋಟಿ ಮಹಿಳೆಯರ ಖಾತೆಗೆ ಹಣ ತಲುಪಿದೆ ಆದರೆ ಇನ್ನು ಸುಮಾರು 9 ಲಕ್ಷದಷ್ಟು ಮಹಿಳೆಯರಿಗೆ ಹಣ ಸಂದಾಯವಾಗಿಲ್ಲ.
ಇತ್ತೀಚಿಗೆ ಈ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಯಜಮಾನಿಯರ ಅಕೌಂಟ್ ಗೆ ಹಣ ಬರುತ್ತೆ, ಇದಕ್ಕಾಗಿ ಸರಳ ಸೀಡಿಂಗ್ ಆಗದೆ ಇರುವುದು ಹಾಗೂ ಕೆಲವು ತಾಂತ್ರಿಕ ದೋಷಗಳಿಂದ ಹಣ ಬಂದಿಲ್ಲ ಎಂದರು.
ಗೃಹಲಕ್ಷ್ಮಿ ಯೋಜನೆಗೆ ಹಣ ಹಾಕಲು ಸರ್ಕಾರದ ಬಳಿ ದುಡ್ಡಿಲ್ಲ ಎಂದೆಲ್ಲಾ ಜನರು ಮಾತನಾಡಿಕೊಳ್ಳುತ್ತಿದ್ದಾರೆ, ಆದರೆ ಸಮಸ್ಯೆ ಅದಲ್ಲ. ನಾವು ಗೃಹಲಕ್ಷ್ಮಿ ಯೋಜನೆಗಾಗಿ ಹಣ ಮೀಸಲಿಟ್ಟಿದ್ದೇವೆ ಹಾಗಾಗಿ ಮಿಸ್ ಆಗದೆ ಪ್ರತಿಯೊಬ್ಬರ ಖಾತೆಗೂ ಹಣ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಯಜಮಾನಿಯರು ಏನು ಮಾಡಬೇಕು..?
ನಿಮ್ಮ ಖಾತೆಗೆ ಇನ್ನೂ ಹಣ ಬರದೇ ಇದ್ರೆ ಹತ್ತಿರದ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ವೀಕೃತಿ, ಬ್ಯಾಂಕ್ ಪಾಸ್ ಬುಕ್ (ವಿವರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ನೀಡಿ ಅವರ ಬಳಿ ಸಲಹೆಯನ್ನ ಪಡೆದುಕೊಳ್ಳಿ, ಏಕೆ ಹಣ ಬರಲಿಲ್ಲ, ಏನು ಸಮಸ್ಯೆಯಾಗಿದೆ..ಏನು ಮಾಡಬೇಕು ಎಂಬ ಸಲಹೆ ಪಡೆಯಿರಿ.