HomeKarnatakaರಾಜ್ಯದ ಸಾರಿಗೆ ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ : ಶೀಘ್ರವೇ 4581 ಬಸ್ ಗಳಲ್ಲಿ `UPI’...

ರಾಜ್ಯದ ಸಾರಿಗೆ ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ : ಶೀಘ್ರವೇ 4581 ಬಸ್ ಗಳಲ್ಲಿ `UPI’ ವ್ಯವಸ್ಥೆ ಜಾರಿ

ಬೆಂಗಳೂರು : ರಾಜ್ಯದಲ್ಲಿಯೇ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದ ಯುಪಿಐ ಪಾವತಿ ವ್ಯವಸ್ಥೆ ಯಶಸ್ವಿಯಾಗಿದೆ. ಪ್ರಸಕ್ತ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲ ಬಸ್‌ಗಳಿಗೆ ಅಳವಡಿಸಲಾಗಿದ್ದು, ಶೀಘ್ರವಾಗಿ ಸಂಸ್ಥೆಯ ಎಲ್ಲಾ ಬಸ್‌ಗಳಿಗೂ ವಿಸ್ತರಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ಸಾರಿಗೆ  ಬಸ್ ಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಮೂಲಕ ಚಿಲ್ಲರೆ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದ್ದು,  ಫೋನ್ ಪೇ  ಕಂಪನಿಯ ಸಹಯೋಗದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಜಾರಿಗೆ  ತಲಾಗುತ್ತಿದೆ.  ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಸೇರಿದಂತೆ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಲ್ಲರೆ ಸಮಸ್ಯೆ ಪರಿಹಾರ, ನಗದು ರಹಿತ ಪ್ರಯಾಣ ಮತ್ತಿತರ ಪ್ರಯೋಜನಗಳಿಂದಾಗಿ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಹಾಗೂ ಸಿಬ್ಬಂದಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಶೀಘ್ರವಾಗಿ ಸಂಸ್ಥೆಯ ಎಲ್ಲಾ 4581 ಬಸ್‌ಗಳಲ್ಲಿ ಈ ವ್ಯವಸ್ಥೆಯನ್ನು ವಿಸ್ತರಿಸಲಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular