HomeEntertainmentBIG NEWS: ಆರ್ಯವರ್ಧನ್ ಗುರೂಜಿ ವಿರುದ್ಧ ಸಿಡಿದೆದ್ದ ನಟ ಕಿಚ್ಚ ಸುದೀಪ್ ಅಭಿಮಾನಿಗಳು

BIG NEWS: ಆರ್ಯವರ್ಧನ್ ಗುರೂಜಿ ವಿರುದ್ಧ ಸಿಡಿದೆದ್ದ ನಟ ಕಿಚ್ಚ ಸುದೀಪ್ ಅಭಿಮಾನಿಗಳು

ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ, ಆರ್ಯವರ್ಧನ್ ಗುರೂಜಿ ವಿರುದ್ಧ ನಟ ಕಿಚ್ಚ ಸುದೀಪ್ ಅಭಿಮಾನಿಗಳು ಸಿಡಿದೆದ್ದಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋ ಬಗ್ಗೆ ಹಾಗೂ ನಟ ಕಿಚ್ಚಾ ಸುದೀಪ್ ಬಗ್ಗೆ ಲೇವಡಿ ಮಾಡಿ, ಲಘುವಾಗಿ ಮಾತನಡಿದ ಕಾರಣಕ್ಕೆ ಆರ್ಯವರ್ಧನ್ ಗುರೂಜಿ ವಿರುದ್ಧ ನಟ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಆರ್ಯವರ್ಧನ್ ಗುರೂಜಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ಕಿಚ್ಚ ಸುದೀಪ್ ಅವರನ್ನು ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. ರಾಮೋಹಳ್ಳಿ ಬಳಿ ನಿರ್ಮಿಸಲಾಗಿರುವ ಬಿಗ್ ಬಾಸ್ ಮನೆ ಬಳಿ ಕೆಲ ಸಮಯದಲ್ಲೇ ಸುದೀಪ್ ಆಗಮಿಸಲಿದ್ದು, ಅಲ್ಲಿಗೆ ತೆರಳಿ ಕ್ಷಮೆಯಾಚಿಸುವಂತೆ ಕಿಚ್ಚನ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಆರ್ಯವರ್ಧನ್ ಗುರೂಜಿ ಸಂದರ್ಶನವೊಂದರಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಬಿಗ್ ಬಾಸ್ ಸ್ಪರ್ಧೆ ಬಗ್ಗೆ ಲಘುವಾಗಿ ಮಾತನಾಡಿದ್ದರು ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular