ಬೆಂಗಳೂರು: ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ.
ವೀಕ್ಷಕರಾದ ನಿರ್ಮಲಾ ಸೀತಾರಾಮನ್, ದುಶ್ಯಂತಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಮೊದಲಾದವರು ಭಾಗವಹಿಸಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ್ ಅವರನ್ನು ಆಯ್ಕೆ ಮಾಡುವುದು ಬಹುತೇಕ ನಿಶ್ಚಿತವಾಗಿದೆ. ಈಗಾಗಲೇ ಪಕ್ಷದ ಪ್ರಮುಖರು ಶಾಸಕರೊಂದಿಗೆ ಹೈಕಮಾಂಡ್ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದ್ದು, ಕೆಲವೇ ನಿಮಿಷಗಳಲ್ಲಿ ಆರ್. ಅಶೋಕ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.