HomeLatest NewsBIG NEWS: ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಉಪ ಪ್ರಧಾನಿ ರಿಚರ್ಡ್...

BIG NEWS: ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್: ಅಹಮದಾಬಾದ್ ನಲ್ಲಿ ಭಾರಿ ಭದ್ರತೆ

ಅಹಮದಾಬಾದ್‌: ಭಾನುವಾರ ಇಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಭದ್ರತೆ ಮತ್ತು ಇತರ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ಗಾಂಧಿನಗರದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಭಾನುವಾರದ ಪಂದ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಪಟೇಲ್ ಅವರು ಉನ್ನತ ಅಧಿಕಾರಿಗಳೊಂದಿಗೆ ಭದ್ರತೆ ಮತ್ತು ಇತರ ವ್ಯವಸ್ಥೆಗಳನ್ನು ಪರಿಶೀಲಿಸಿದರು” ಎಂದು ಪ್ರಕಟಣೆ ತಿಳಿಸಿದೆ.

ಮೈದಾನ, ತಂಡಗಳು, ವಿಐಪಿಗಳ ಭದ್ರತೆ ಮತ್ತು ಸಂಚಾರ ನಿರ್ವಹಣೆಗೆ 4,500 ಸಿಬ್ಬಂದಿಯನ್ನು ನಿಯೋಜಿಸುವುದು ಸೇರಿದಂತೆ ಪಂದ್ಯದ ಸುಗಮ ನಿರ್ವಹಣೆಗೆ ವಿಸ್ತಾರವಾದ ವ್ಯವಸ್ಥೆಗಳ ಕುರಿತು ಪೊಲೀಸ್ ಅಧಿಕಾರಿಗಳು ಸಿಎಂಗೆ ತಿಳಿಸಿದರು.

ವಿಐಪಿ ಸಂಚಾರದಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಮುಚ್ಚಿದ ರಸ್ತೆಗಳು ಮತ್ತು ತಿರುವುಗಳ ಬಗ್ಗೆ ಜನರಿಗೆ ಮುಂಚಿತವಾಗಿ ಸರಿಯಾದ ಮಾಹಿತಿಯನ್ನು ಒದಗಿಸುವಂತೆ ಸೂಚನೆ ನೀಡಿದರು.

ದೇಶ ಮತ್ತು ವಿದೇಶಗಳಿಂದ ನಗರಕ್ಕೆ ಆಗಮಿಸುವ ನಿರೀಕ್ಷೆಯಿರುವ ಅಭಿಮಾನಿಗಳ ಅನುಕೂಲಕ್ಕಾಗಿ ಮೊಟೆರಾ ನಿಲ್ದಾಣದ ಕಡೆಗೆ(ಕ್ರೀಡಾಂಗಣ ಸಮೀಪ) ಓಡುವ ಮೆಟ್ರೋ ರೈಲುಗಳ ಸಂಚಾರ ಹೆಚ್ಚಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಭಾರತ ತಂಡ ಗುರುವಾರ ಸಂಜೆ ಇಲ್ಲಿಗೆ ತಲುಪಿದರೆ, ಆಸ್ಟ್ರೇಲಿಯಾ ತಂಡ ಶುಕ್ರವಾರ ನಗರಕ್ಕೆ ತಲುಪಿತು. ಶುಕ್ರವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ತಂಡ ಅಭ್ಯಾಸ ನಡೆಸಿತು.

ಭಾರತೀಯ ವಾಯುಪಡೆಯ ಹೆಸರಾಂತ ಸೂರ್ಯ ಕಿರಣ್ ಏರೋಬ್ಯಾಟಿಕ್ಸ್ ತಂಡವು ಭಾನುವಾರದ ಪಂದ್ಯಕ್ಕೂ ಮುನ್ನ ವೈಮಾನಿಕ ಪ್ರದರ್ಶನವನ್ನು ಏರ್ಪಡಿಸಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular