HomeKarnatakaಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 15 ಸಾವಿರ ‘ಪೊಲೀಸ್ ಕಾನ್ಸ್ ಟೇಬಲ್’...

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 15 ಸಾವಿರ ‘ಪೊಲೀಸ್ ಕಾನ್ಸ್ ಟೇಬಲ್’ ನೇಮಕಾತಿಗೆ ಕ್ರಮ

ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ 15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳು ಖಾಲಿ ಇದ್ದು, ಕಳೆದ ನಾಲ್ಕು ವರ್ಷದಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಪ್ರಸ್ತುತ ದಿನಗಳಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಅಗತ್ಯತೆ ಇದೆ. ಪ್ರತಿ ವರ್ಷವೂ 3 ಸಾವಿರ ಪೊಲೀಸ್ ಸಿಬ್ಬಂದಿ ನಿವೃತ್ತಿ ಹೊಂದುತ್ತಿದ್ದಾರೆ. ಹಾಗಾಗಿ ಸ್ಥಗಿತಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಚಾಲನೆ ನೀಡಲಾಗುವುದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಇಲ್ಲಿನ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪೊಲೀಸ್ ಸಮುಚ್ಚಯ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸ್ ಕಾನ್ಸ್ಟೇಬಲ್ಗೆ ಕನಿಷ್ಟ ವಿದ್ಯಾರ್ಹತೆ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಹತೆಯಾಗಿದೆ. ಆದರೆ ಈ ಹುದ್ದೆಗೆ ಬಿಇ, ಎಂಬಿಎ, ಎಂಎ ಎಂಇಡಿ ಸೇರಿದಂತೆ ಶೇ.60ರಷ್ಟು ಅರ್ಜಿಗಳು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳೇ ಹೆಚ್ಚಾಗಿ ಅರ್ಜಿ ಸಲ್ಲಿಸುತ್ತಾರೆ. ಇದರ ಅರ್ಥ ಪೊಲೀಸ್ ಹುದ್ದೆ ಕೂಡ ಗೌರವಯುತವಾಗಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಅಭಿಪ್ರಾಯಪಟ್ಟರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಎನ್ನುವ ಉದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಈವರೆಗೆ 25 ಕೋಟಿ ಜನ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರನ್ನು ಸಬಲರನ್ನಾಗಿ, ಸ್ವಾವಲಂಬಿಯನ್ನಾಗಿ ಮಾಡುತ್ತಿದೆ ಎಂದರು.

ಕರ್ನಾಟಕ ಪೊಲೀಸ್ ಇತರೆ ರಾಜ್ಯಗಳನ್ನು ಹೋಲಿಸಿದಾಗ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಹೇಳಿದರು.
ಇತ್ತೀಚೆಗೆ ನಿರ್ಮಾಣ ಮಾಡಲಾಗಿರುವ ಕೆಲವು ಪೊಲೀಸ್ ಸ್ಟೇಷನ್ಗಳನ್ನು ಐಟಿ ಕಂಪನಿಗಳ ರೀತಿಯಲ್ಲಿ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ತಂತ್ರಜ್ಞಾನದ ಸಹಾಯದಿಂದ ಪ್ರಸ್ತುತ ದಿನಗಳಲ್ಲಿ ಪೊಲೀಸರು ಅಪರಾಧಿಗಳನ್ನು ಶೀಘ್ರವೇ ಪತ್ತೆಹಚ್ಚುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಪ್ರಕರಣಗಳನ್ನು ತ್ವರಿತಗತಿಯಲ್ಲಿ ಭೇದಿಸುವಲ್ಲಿ ಸನ್ನದ್ಧರಾಗಿದ್ದಾರೆ ಎಂದರು. ಪೊಲೀಸ್ ಗೃಹ 2025 ಕಾರ್ಯಕ್ರಮದಲ್ಲಿ ಇನ್ನೂ 10 ಸಾವಿರ ಮನೆ ನಿರ್ಮಾಣ ಮಾಡುವ ಗುರಿ ಇದೆ. ಪೊಲೀಸ್ ವಸತಿ ನಿಗಮದಲ್ಲಿ ರೂ.600 ಕೋಟಿ ಅನುದಾನವಿದ್ದು, ಹೆಚ್ಚಿನ ರೀತಿಯಲ್ಲಿ ಸುಂದರವಾದ ಪೊಲೀಸ್ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular