
ನ.24 ರಂದು ಮಧ್ಯಾಹ್ನ 12 ಗಂಟೆಯಿಂದ ನ.26 ರಂದು ಬೆಳಗ್ಗೆ 11.59 ಗಂಟೆವರೆಗೆ ಎಲ್ಲಾ ರೀತಿಯ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದೆ.
ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ.2 ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಇರಲ್ಲ.ಬೆಸ್ಕಾಂ, ಸೆಸ್ಕ್ ಮೈಸೂರು, ಮೆಸ್ಕಾಂ-ಮಂಗಳೂರು, ಜೆಸ್ಕಾಂ ಕಲಬುರಗಿ, ಹೆಸ್ಕಾಂ ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ಜನರಿಗೆ ಸಮಸ್ಯೆಯಾಗಲಿದೆ.
ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು. ಹಿರಿಯೂರು. ಹಾಗೂ ಮೈಸೂರಿನ ಮಳವಳ್ಳಿ, ನಂಜನಗೂಡು. ಚಾಮರಾಜನಗರ. ಬಂಟ್ವಾಳ, ಕಡೂರು, ಮಂಗಳೂರು. ಭದ್ರಾವತಿ, ಚಿಕ್ಕಮಗಳೂರು. ಶಿವಮೊಗ್ಗ ಸೇರಿದಂತೆ ಹಲವು ಭಾಗದ ಜನರಿಗೆ ಸಮಸ್ಯೆಯಾಗಲಿದೆ.

