ರಾಯ್ಪುರ: ಛತ್ತೀಸ್ಗಢದಲ್ಲಿ ಶುಕ್ರವಾರ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಮತದಾನದ ಮಧ್ಯೆ ಗರಿಯಾಬಂದ್ನಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಜವಾನ್ ಸಾವನ್ನಪ್ಪಿದ್ದಾರೆ.
ಹತ್ಯೆಗೀಡಾದ ಐಟಿಬಿಪಿ ಯೋಧನನ್ನು ಹೆಡ್ ಕಾನ್ಸ್ಟೇಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಬಡೇ ಗೋಬ್ರಾ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಮತದಾನ ತಂಡ ಮತದಾನ ನಡೆಸಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.