HomeKarnatakaಲೋಕಾಯುಕ್ತ ಪ್ರಕರಣದಲ್ಲಿ ಲಂಚ ಕೇಳಿಲ್ಲ ಎಂದು ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಜೈಲು...

ಲೋಕಾಯುಕ್ತ ಪ್ರಕರಣದಲ್ಲಿ ಲಂಚ ಕೇಳಿಲ್ಲ ಎಂದು ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ

ಬಾಗಲಕೋಟೆ: ಲೋಕಾಯುಕ್ತ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಸಾದಾ ಶಿಕ್ಷೆ, 10,000 ರೂ. ದಂಡ ವಿಧಿಸಿ ಬಾಗಲಕೋಟೆ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಶಶಿಕಾಂತ ಹಡಗಲಿ ಶಿಕ್ಷೆಗೆ ಒಳಗಾದ ವ್ಯಕ್ತಿ. ತನ್ನ ತಾಯಿಗೆ ಬರಬೇಕಾದ ಪರಿಹಾರದ ಹಣ 10,000 ರೂ. ಮಂಜೂರು ಮಾಡಲು ಹುನಗುಂದ ಸಿಡಿಪಿಓ ಕಚೇರಿಯ ಎಫ್.ಡಿ.ಎ. ಗೋಪಾಲ ಹೆರಕಲ್ ಒಂದು ಸಾವಿರ ರೂಪಾಯಿ ಲಂಚ ಕೊಡುವಂತೆ ಕೇಳಿದ್ದರು ಎಂದು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋಪಾಲ ಒಂದು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ದೂರುದಾರ ಶಶಿಕಾಂತ ಪರಿಹಾರ ಹಣ ಮಂಜೂರಿಗೆ ಗೋಪಾಲ ಯಾವುದೇ ಲಂಚ ಕೇಳಿಲ್ಲ. ಲೋಕಾಯುಕ್ತ ಪೊಲೀಸರು ಒಂದು ಬಿಳಿ ಹಾಳೆಯ ಮೇಲೆ ಸಹಿ ಪಡೆದಿದ್ದಾರೆ ಎಂದು ಸುಳ್ಳು ಸಾಕ್ಷಿ ಹೇಳಿದ್ದಾರೆ.

ಇದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಶಶಿಕಾಂತ ವಿರುದ್ಧ ದೂರು ದಾಖಲಿಸಲಾಗಿತ್ತು. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಪಲ್ಲವಿ ಆರ್. ಅವರು 10 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಎಂ.ಕೆ. ಪಾಟೀಲ ಮತ್ತು ಎಂ.ಸಿ. ಮಸಳಿ ಅವರು ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular