BIG NEWS: ಬರ್ಮುಡಾ ಟ್ರಯಾಂಗಲ್ ರಹಸ್ಯವನ್ನೇ ಮೀರಿಸಿದೆ ಚಿದಂಬರ ರಹಸ್ಯ….ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ 48 ಗಂಟೆಗಳಲ್ಲಿ ವರ್ಗದ ಪಟ್ಟಿಯಲ್ಲಿ ಒಳನುಸುಳಿದ್ದು ಹೇಗೆ? HDK ಪ್ರಶ್ನೆ

ಬೆಂಗಳೂರು: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸಂಭಾಷಣೆಯ ವಿಡಿಯೋದಲ್ಲಿ ಪ್ರಸ್ತಾಪವಾಗಿದ್ದ ವಿವೇಕಾನಂದ ಈಗ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗಗಳ ಪಟ್ಟಿಯಲ್ಲಿ ಒಳ ನುಸುಳಿದ್ದು ಹೇಗೆ? ಓಹ್! ಒಂದು ಸರ್ಕಾರ ವಿಸ್ಮಯಗಳ ಆಗರ!! ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್ ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಾಗಾರಿಕೆಗೆ ನೂರೆಂಟು ನಮನ ಎಂದು ವ್ಯಂಗ್ಯವಾಡಿದ್ದಾರೆ.

ವಿಡಿಯೋ ವಿವೇವಾಕನಂದ ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ. ಉತ್ತರ ಹೇಳಲೇಬೇಕು. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ? ಸವಾಲು ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read