ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ ಆಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭನಗರ ಕ್ಷೇತ್ರದ ಶಾಸಕರಾದ ಅಶೋಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅಶೋಕ್ ಅವರು ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಪ್ರಬಲ ಹೋರಾಟ ನಡೆಸುವುದರ ಜತೆಗೆ, ರಾಜ್ಯದ ಜನರ ದನಿಯಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
https://twitter.com/hd_kumaraswamy/status/1725559534826201174?ref_src=twsrc%5Egoogle%7Ctwcamp%5Eserp%7Ctwgr%5Etweet