HomeKarnataka`ಯುವನಿಧಿ’ ಯೋಜನೆ ಜಾರಿಗೆ ಸರ್ಕಾರದಿಂದ ಸಿದ್ಧತೆ : ಡಿಪ್ಲೋಮಾ, ಪದವೀಧರರು ಈ ದಾಖಲೆ ರೆಡಿ ಇಟ್ಟುಕೊಳ್ಳಿ!

`ಯುವನಿಧಿ’ ಯೋಜನೆ ಜಾರಿಗೆ ಸರ್ಕಾರದಿಂದ ಸಿದ್ಧತೆ : ಡಿಪ್ಲೋಮಾ, ಪದವೀಧರರು ಈ ದಾಖಲೆ ರೆಡಿ ಇಟ್ಟುಕೊಳ್ಳಿ!

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ  ಪೈಕಿ ನಾಲ್ಕ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದ್ದು,  ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ತರಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಡಿಪ್ಲೋಮಾ ಹಾಗೂ ಪದವೀಧರರಿಗೆ ಮಾಸಿಕ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು 2024 ರ ಜನವರಿ ಮೊದಲ ವಾರವೇ ಜಾರಿಗೆ ತರಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ.  ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ  ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. 2024ರ ಜನವರಿ ಮೊದಲ ವಾರವೇ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.

ಯುವ ನಿಧಿ  ನಿರುದ್ಯೋಗ  ಭತ್ಯೆ  ಪಡೆದುಕೊಳ್ಳಲು  ಬೇಕಾಗಿರುವ  ದಾಖಲೆಗಳು!

ಆಧಾರ್ ಕಾರ್ಡ್

ಆದಾಯ ಪ್ರಮಾಣ ಪತ್ರ

ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ

ಬ್ಯಾಂಕ ಖಾತೆಯ ವಿವರ

ಇ-ಮೇಲ್ ಐಡಿ

ಮೊಬೈಲ್ ಸಂಖ್ಯೆ

ಭಾವಚಿತ್ರ

ಪದವಿ ಹಾಗೂ ಡಿಪ್ಲಮೋ ಮುಗಿಸಿದವರ ಕೊನೆಯ ವರ್ಷದ ಅಂಕಪಟ್ಟಿ.

For Latest News Updates, Join Our Whatsapp Community🚩
RELATED ARTICLES

Most Popular