HomeKarnatakaಪರಿಶಿಷ್ಟ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ವೆಬ್ಸೈಟ್ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದು.

ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಣ್ಣ ಆದಾಯ ಗಳಿಸಲು ಆರ್ಥಿಕ ಚಟುವಟಿಕೆಗಳಿಗಾಗಿ ನಿಗಮಗಳಿಂದ ನೇರ ಸಾಲ (ಗರಿಷ್ಟ ವೆಚ್ಚ ರೂ.1 ಲಕ್ಷ, ಅದರಲ್ಲಿ ಶೇ.50 ಸಾಲ ಮತ್ತು ಶೇ.50 ಸಹಾಯಧನ(ಶೇ.4 ರಷ್ಟು ಬಡ್ಡಿ ದರ).

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ವ್ಯಾಪಾ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.1 ಲಕ್ಷ, ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

ಸ್ವಾವಲಂಬಿ ಸಾರಥಿ: ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.4 ಲಕ್ಷ ನೀಡಲಾಗುತ್ತದೆ. ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು)ಯಡಿ ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.2.50 ಲಕ್ಷ ಮಂಜೂರು ಮಾಡಲಾಗುವುದು. ಇದರಲ್ಲಿ ರೂ.1.50 ಲಕ್ಷ ಸಹಾಯಧನ ಮತ್ತು ರೂ.1 ಲಕ್ಷ ಸಾಲ(ಶೇ.4 ರಷ್ಟು ಬಡ್ಡಿ ದರ).

ಗಂಗಾ ಕಲ್ಯಾಣ ಯೋಜನೆಯಡಿ 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.3.75 ಲಕ್ಷ(ಇದರಲ್ಲಿ ರೂ.50 ಸಾವಿರ ಸಾಲವೂ ಸೇರಿರುತ್ತದೆ).ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ಭಾಗಾಯ್ತು ಅಥವಾ ಎರಡು ಎಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ.25 ಲಕ್ಷ/ 20 ಲಕ್ಷ ಸಹಾಯಧನ ಶೇ.50 ಸಾಲ, ಶೇ.50(ಶೇ.6 ರಷ್ಟು ಬಡ್ಡಿದರ).

ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವೆಬ್ಸೈಟ್ https://adcl.karnataka.gov.in, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ https://adijambava.karnataka.gov.in, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ https://www.kbdc.karnataka.gov.in ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ https://kssksc.kar.nic.in/ ನ್ನು ಸಂಪರ್ಕಿಸಬಹುದು.ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್ಸೈಟ್ ವಿಳಾಸ https://sevasindhuservices.karnataka.gov.in ಮೂಲಕ ಅಪ್ಲೋಡ್ ಮಾಡಿ ಅರ್ಜಿಯನ್ನು ನವೆಂಬರ್, 29 ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular