HomeKarnatakaBIG NEWS: ಸಿಎಂ ಸುಳ್ಳು ಸಾಬೀತು; ಯಾವಾಗ ರಾಜೀನಾಮೆ ಕೊಡ್ತಾರೆ? ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...

BIG NEWS: ಸಿಎಂ ಸುಳ್ಳು ಸಾಬೀತು; ಯಾವಾಗ ರಾಜೀನಾಮೆ ಕೊಡ್ತಾರೆ? ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ವರ್ಗಾವಣೆ ದಂಧೆ ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಬೀತಾಗಿದೆ ಯಾವಾಗ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ? ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಪೊಲೀಸ್ ವರ್ಗಾವಣೆ ಪಟ್ಟಿಯಿಂದ ಸಿಎಂ ಸುಳ್ಳು ಹೇಳಿದ್ದು ಗೊತ್ತಾಗಿದೆ. ಅಂದಮೇಲೆ ಈಗ ಸಿಎಂ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡ್ತಾರೆ? ಯಾವಾಗ ನಿವೃತ್ತಿಯಾಗ್ತಾರೆ ಎಂದು ಅವರೇ ಹೇಳಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ಮುಂದೆ ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ. ಬರೀ ಸುಳ್ಳುಗಳನ್ನೇ ಹೇಳುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಸಚಿವ ಜಮೀರ್ ಅಹ್ಮದ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಅವರು, ಜಮೀರ್ ಅಹ್ಮದ್ ಸ್ಪೀಕರ್ ಕುರ್ಚಿಯನ್ನು ತಾಲಿಬಾನ್ ಮಾಡಲು ಹೊರಟಿದ್ದಾರೆ. ಯಾವ ಕಾಂಗ್ರೆಸ್ ನಾಯಕರು ಅವರ ಹೇಳಿಕೆಯನ್ನು ಖಂಡಿಸುತ್ತಿಲ್ಲ ಮೊದಲು ಜಮೀರ್ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular