ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ನಡೆದಿದೆ.
ಮಣಿಕಂಠ ರಾಠೋಡ್ ಚಿತ್ತಾಪುರದಿಂದ ಕಲಬುರ್ಗಿಗೆ ವಾಹನದಲ್ಲಿ ಬರುತ್ತಿದ್ದರು. ಈ ವೇಳೆ ಶಹಾಬಾದ್ ಬಳಿ ರಾಠೋಡ್ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬಿಯರ್ ಬಾಟಲ್ ಗಳಿಂದ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮಣಿಕಂಠ ರಾಠೋಡ್ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರ್ಗಿ ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಕಂಠ ರಾಠೋಡ್ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಸೋತಿದ್ದರು.