HomeKarnatakaರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಮಹತ್ವದ ಕ್ರಮ

ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಮಹತ್ವದ ಕ್ರಮ

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು, ಪ್ರಾಯೋಗಿಕವಾಗಿ ಗದಗ ಜಿಲ್ಲೆಯಲ್ಲಿ ನವೆಂಬರ್ 26 ರಂದು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರು, ಕಾನೂನು ಇಲಾಖೆ, ಸಂಘಟನೆಗಳು, ಪೊಲೀಸ್, ವಿರೋಧ ಪಕ್ಷಗಳು, ಮಾಧ್ಯಮಗಳು, ಗ್ರಾಮದ ಹಿರಿಯರು ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular