ಮೈಸೂರು : ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಕ್ಷ ಸಂಘಟನೆಗೆ ನಾನು ಮೊದಲ ಆದ್ಯತೆ ನೀಡುತ್ತೇನೆ, ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇವೆ. ಮೈಸೂರು ನನಗೆ ಅವಿನಾಭಾವ ಸಂಬಂಧ ಹೊಂದಿರುವ ಜಿಲ್ಲೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತೇವೆ, ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆದ್ದು ಮೋದಿ ಕೈಬಲಪಡಿಸಬೇಕು ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.