ಕೊಪ್ಪಳ : ಇಡೀ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವೇ ಇಲ್ಲ’ ಎಂದು ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.
ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲಾ, ಎರಡೂ ಕೈ ತಟ್ಟಿದ್ರೆನೆ ಚಪ್ಪಾಳೆ ಆಗೋದು ಎಂದು ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಮಾವನಿಗೆ ಮಾಜಿ ಶಾಸಕರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದಲ್ಲಿ ಮಹಿಳೆಯ ಮೇಲೆ ಕಾಂಗ್ರೆಸ್ ಮುಖಂಡ ಅತ್ಯಾಚಾರ ಆರೋಪ ಕೇಳಿ ಬಂದಿದ್ದು ಪ್ರಕರಣ ದಾಖಲಾದ್ರೂ ಕ್ರಮಕ್ಕೆ ಸಂಬಂಧಪಟ್ಟವರಿಂದ ಮೀನಾಮೇಷ ಎಣಿಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ಥ ಮಹಿಳೆಯ ಮಾವ ನ್ಯಾಯಕ್ಕೆ ಎಸ್ಪಿ, ಮಾಜಿ ಶಾಸಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಾಜಿ ಶಾಸಕ ಈ ರೀತಿ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲಾ, ಎರಡೂ ಕೈ ತಟ್ಟಿದ್ರೇನೆ ಚಪ್ಪಾಳೆ ಆಗೋದು ಎಂದು ಹೇಳಿದ್ದಾರೆ ಎನ್ನಲಾಗಿದೆ.