ಬೆಂಗಳೂರು : ಮುರುಘಾಶ್ರೀಗಳು ಆರೋಪಿ ಅಷ್ಟೇ, ಅಪರಾಧಿಯಲ್ಲ ಕಾನೂನಿಗೆ ತಲೆಬಾಗಲು ಸಿದ್ದರಿದ್ದಾರೆ ಎಂದು ಮಾಜಿ ಶಾಸಕ ಶಿವಶಂಕರ್ ಹೇಳಿದ್ದಾರೆ.
2 ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳಿಗೆ ಮತ್ತೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು, ಬಂಧನವಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆ ಮಾಜಿ ಶಾಸಕ ಶಿವಶಂಕರ್ ಪ್ರತಿಕ್ರಿಯೆ ನೀಡಿದ್ದು, ಎಲ್ಲವನ್ನೂ ಎದುರಿಸಲು ಮುರುಘಾ ಶ್ರೀಗಳು ಸಿದ್ಧರಿದ್ದಾರೆ. ಕೋರ್ಟ್ ವಾರಂಟ್ ಜಾರಿ ಮಾಡುತ್ತೆಂದು ನಿರೀಕ್ಷೆ ಇರಲಿಲ್ಲ. ಮುರುಘಾಶ್ರೀಗಳು ಆರೋಪಿ ಅಷ್ಟೇ, ಅಪರಾಧಿಯಲ್ಲ. ಮತ್ತೊಮ್ಮೆ ಸಂಕಷ್ಟ ಎದುರಾಗಿದೆ, ಎದುರಿಸಲು ಸಿದ್ಧರಾಗಿದ್ದಾರೆ ಎಂದು ಮಾಜಿ ಶಾಸಕ ಶಿವಶಂಕರ್ ಹೇಳಿದ್ದಾರೆ.