ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ( Leopard) ಪ್ರತ್ಯಕ್ಷವಾಗಿದ್ದು , ಜನರಲ್ಲಿ ಆತಂಕ ಮನೆ ಮಾಡಿದೆ.
ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕ ಮನೆ ಮಾಡಿದೆ. ಸೋಲದೇವನಹಳ್ಳಿ, ಹಂದಿಗುಟ್ಟೆ ಗ್ರಾಮಗಳ ಸುತ್ತಮುತ್ತ ಚಿರತೆ ಉಪಟಳ ಹೆಚ್ಚಾಗಿದೆ.
ನಿನ್ನೆ ರಾತ್ರಿ ಗ್ರಾಮದ ಕೆಲವರ ಅಡಕೆ ತೋಟದಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಚಿರತೆ ಚಲನವಲನ ಸೆರೆಯಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ರೈತರು ಹೊರಗೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಬೆಂಗಳೂರಿನ ಅಪಾರ್ಟ್ ಮೆಂಟ್ ಗೆ ಚಿರತೆಯೊಂದು ನುಗ್ಗಿ ಭಯ ಸೃಷ್ಟಿಸಿತ್ತು.