HomeKarnatakaBREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ

BREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಗಳ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.

ಮುರುಘಾ ಶರಣರ ಬಿಡುಗಡೆ ಮಾಡುವಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬಂಧಿತರಾಗಿದ್ದ ಮುರುಘಾ ಶ್ರೀಗಳನ್ನು ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗೆ ಬಂಧನದ ವಾರೆಂಟ್ ಜಾರಿ ಮಾಡಿತ್ತು. ಕೋರ್ಟ್ ಆದೇಶದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರ ತಂಡ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾ ಶ್ರೀಗಳನ್ನು ಬಂಧಿಸಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular