HomeKarnatakaಉಡುಪಿ ನಾಲ್ವರ ಹತ್ಯೆ ಪ್ರಕರಣ ಬಗ್ಗೆ ಪ್ರಚೋದನಾಕಾರಿ ಪೋಸ್ಟ್: ಕೇಸ್ ದಾಖಲು

ಉಡುಪಿ ನಾಲ್ವರ ಹತ್ಯೆ ಪ್ರಕರಣ ಬಗ್ಗೆ ಪ್ರಚೋದನಾಕಾರಿ ಪೋಸ್ಟ್: ಕೇಸ್ ದಾಖಲು

ಉಡುಪಿ: ಉಡುಪಿಯ ನೇಜಾರು ಗ್ರಾಮದಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಫಿಜ್ ಮೊಹಮ್ಮದ್ ಎಂಬಾತನ ವಿರುದ್ಧ ಉಡುಪಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೊಹಮ್ಮದ್ ಸಾಮಾಜಿಕ ಜಾಲತಾಣದಲ್ಲಿ ಪ್ರಿಪರೇಷನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂಬ ಬರಹ ಪ್ರಕಟಿಸಿದ್ದ. ಈ ಹಿನ್ನೆಲೆಯಲ್ಲಿ ಹಫಿಜ್ ವಿರುದ್ಧ ಅಪರಾದ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಪ್ರಯತ್ನದ ಆರೋಪದಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಜರುಗಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular