![](https://kannadadunia.com/wp-content/uploads/2022/04/hdk-5-2.jpg)
ರಾಮನಗರ: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನನ್ನ ಜೀವನ ತೆರೆದ ಪುಸ್ತಕವಿದ್ದಂತೆ ನನಗೆ ಯಾರೂ ಏನೂ ಮಾಡಲು ಅಗಲ್ಲ. ಪೋಸ್ಟರ್ ಅಂಟಿಸಿದ್ದಾರೆ. ಅಂಟಿಸಲಿ ಎಂದು ಹೇಳಿದರು.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರು ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಬಗ್ಗೆ ಪ್ರಚಾರ ಮಡುತ್ತಾ ಜಾಹೀರಾತು ನೀಡುವುದರಲ್ಲಿ ಕಾಲ ಕಳೆಯುತ್ತಿದ್ದಾರೆ. ಮತ್ತೊಂದೆಡೆ ನನ್ನ ಬಗ್ಗೆ ಸಿನಿಮಾ ಮಾದರಿಯಲ್ಲಿ ಪೋಸ್ಟರ್ ಅಂಟಿಸಿದ್ದಾರೆ. ಅಂಟಿಸಿಕೊಳ್ಳಲಿ ಯಾರು ಬೇಡ ಅಂತಾರೆ. ನನ್ನನ್ನು ಯಾರೂ ಏನೂ ಮಾಡಲು ಆಗಲ್ಲ. ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮರಸ್ವಾಮಿ ಒಬ್ಬನೇ ಎಂದರು.
ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ಬಗ್ಗೆ ಧ್ವನಿ ಎತ್ತಿದ್ದು ನಾನೊಬ್ಬನೇ. ನಾನು ಇಲ್ಲಿಯವರೆಗೆ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದು ಕಿಡಿಕಾರಿದರು.