HomeKarnatakaBIG NEWS: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಸರ್ಕಾರಕ್ಕೆ ನೋಟಿಸ್ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ...

BIG NEWS: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಸರ್ಕಾರಕ್ಕೆ ನೋಟಿಸ್ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಸರ್ಕಾರಕ್ಕೆ ನೋಟಿಸ್ ನೀಡಿದ್ದು, 6 ವಾರಗಳಲ್ಲಿ ಉತ್ತರ ನೀಡುವಂತೆ ತಿಳಿಸಿದೆ. ಘಟನೆಗೆ ಕಾರಣವೇನು? ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ನೋಟಿಸ್ ನಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ದಿನಗಳ ಹಿಂದೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ತಾಯಿ ಹಾಗೂ 9 ತಿಂಗಳ ಮಗು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಜೀವ ದಹನವಾಗಿದ್ದರು. ಘಟನೆಯಲ್ಲಿ ಮಹಿಳೆಯ ಪತಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular