ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಸಂಬಂಧ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಿ ಮೈಸೂರು ಎಸ್ ಪಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಬಿಳಿಗೆರೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ ನಂಜೇಶ್ ಹಾಗೂ ಪ್ರಸನ್ನ ಸಸ್ಪೆಂಡ್ ಆದವರು. ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಯುವಕ ಸಾವಿಗೂ ಮುನ್ನ ಹೇಳಿಕೆ ನೀಡಿದ್ದ.
ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ, ಬೇಜವಾಬ್ದಾರಿತನವೆಂದು ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿದ್ದಾರೆ.
ನ.12ರಂದು ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಕಿರಣ್ ಕುಮಾರ್ ಎಂಬ ಯುವಕ ಗಲಾಟೆ ಕೇಸ್ ನಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು ಎಂದು ಠಾಣೆಯಿಂದ ತಪ್ಪಿಸಿಕೊಂಡು ಬಂದು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ.