HomeKarnatakaಜಾತಿಗಣತಿ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಹೆಗ್ಡೆ ಅಧಿಕಾರ ಅವಧಿ ಒಂದು ತಿಂಗಳು ವಿಸ್ತರಿಸಲು ನಿರ್ಧಾರ

ಜಾತಿಗಣತಿ: ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಹೆಗ್ಡೆ ಅಧಿಕಾರ ಅವಧಿ ಒಂದು ತಿಂಗಳು ವಿಸ್ತರಿಸಲು ನಿರ್ಧಾರ

ಬೆಂಗಳೂರು: ಜಾತಿ ಆಧಾರಿತ ಜನಗಣತಿ ವರದಿ ಸ್ವೀಕಾರಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಪೂರಕವಾಗಿ ನವೆಂಬರ್ 25 ರಂದು ಮುಕ್ತಾಯವಾಗಲಿರುವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರದ ಅವಧಿಯನ್ನು ಒಂದು ತಿಂಗಳು ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

2015ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ತಿಳಿಯಲು 164 ಕೋಟಿ ರೂ. ಖರ್ಚು ಮಾಡಿ ಗಣತಿ ಮಾಡಿದ್ದು, ಅದರಲ್ಲಿ ಜಾತಿ ಮತ್ತು ಉಪಜಾತಿಗಳ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕಾಂತರಾಜು ಅವರ ನೇತೃತ್ವದಲ್ಲಿ ಗಣತಿ ನಡೆಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರದಿ ಸ್ವೀಕಾರಕ್ಕೆ ಸಂಬಂಧಿಸಿದಂತೆ ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದು, ವರದಿ ಸ್ವೀಕರಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಹೀಗಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ಒಂದು ತಿಂಗಳು ಮುಂದುವರೆಸಲು ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular