ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 25ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ನ.25ರಂದು ಬೆಂಗಳೂರಿನ ಹೆಚ್ಎಎಲ್ ಏರ್ ಪೋರ್ಟ್ ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಹೆಚ್ಎಎಲ್ ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಳಲಿದ್ದು, ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.