HomeKarnatakaರಾಜ್ಯದ `SC-ST’ ಸಮುದಾಯದವರಿಗೆ ಮತ್ತೊಂದು ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ...

ರಾಜ್ಯದ `SC-ST’ ಸಮುದಾಯದವರಿಗೆ ಮತ್ತೊಂದು ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರಿಗೆ ಸಿಹಿಸುದ್ದಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ‘ಸ್ವಯಂ ಉದ್ಯೋಗ ನೇರ ಸಾಲ ಯೋಜನೆ’ಗೆ ಪರಿಶಿಷ್ಟ  ಜಾತಿ/ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಇದೇ ನವೆಂಬರ್ 29ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ  ಅರ್ಜಿ  ಸಲ್ಲಿಸಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ  ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು.

ಆದಾಯ  ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ.

ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 60 ವರ್ಷ.

ಆದಾಯ  ಪ್ರಮಾಣ ಪತ್ರ ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್.

ಸಮಾಜ  ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ನವೆಂಬರ್ 29ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ  ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24X7 ಸಹಾಯವಾಣಿ 9482300400 3 X 33 @SWDGok fo swd.gok

For Latest News Updates, Join Our Whatsapp Community🚩
RELATED ARTICLES

Most Popular