
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಕಾಡಿಗಟ್ಟುವ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿತ್ತು. ಈ ವೇಳೆ ದಾಳಿಗೊಳಗಾದ ಕಾರ್ತಿಕ್ ಮೃತಪಟ್ಟಿದ್ದರು. ಮೃತ ಕಾರ್ತಿಕ್ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

