HomeKarnatakaವಿದ್ಯಾರ್ಥಿಗಳೇ ಗಮನಿಸಿ : 'ಅರಿವು' ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ

ವಿದ್ಯಾರ್ಥಿಗಳೇ ಗಮನಿಸಿ : ‘ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.30 ಕೊನೆಯ ದಿನಾಂಕವಾಗಿದೆ.

ಈ ಯೋಜನೆಯಲ್ಲಿ ಸಿ.ಇ.ಟಿ ಮತ್ತು ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಪಡೆಯಬಹುದು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.

ಆಸಕ್ತರು ಅರ್ಜಿಗಳನ್ನು ವೆಬ್ ಸೈಟ್ www.kacdc.karnataka.gov.in ಮೂಲಕ ನವೆಂಬರ್ 30ರೊಳಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು-560 010 ಅಥವಾ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156006 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular