HomeKarnatakaಆಹ್ವಾನ ಹಿನ್ನೆಲೆ ಸೋಮಣ್ಣ ಕಾರ್ಯಕ್ರಮಕ್ಕೆ ಸಚಿವರಾದ ಪರಮೇಶ್ವರ್, ರಾಜಣ್ಣ

ಆಹ್ವಾನ ಹಿನ್ನೆಲೆ ಸೋಮಣ್ಣ ಕಾರ್ಯಕ್ರಮಕ್ಕೆ ಸಚಿವರಾದ ಪರಮೇಶ್ವರ್, ರಾಜಣ್ಣ

ತುಮಕೂರು: ಸಿದ್ದಗಂಗಾ ಮಠದಲ್ಲಿ ಡಿಸೆಂಬರ್ 6ರಂದು ಆಯೋಜಿಸಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ಆಹ್ವಾನ ನೀಡಿದ್ದು, ನಾನು ಮತ್ತು ಕೆ.ಎನ್. ರಾಜಣ್ಣ ಹೋಗುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರವಿಂದ ಲಿಂಬಾವಳಿ ಮತ್ತು ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರ ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ನಡೆಯುತ್ತದೆ. ನಮ್ಮ ಹಂತದಲ್ಲಿ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರು ಲೋಕಸಭೆ ಚುನಾವಣೆ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಕೃಷ್ಣಬೈರೇಗೌಡರು ಉಸ್ತುವಾರಿ ಸಚಿವರಾಗಿದ್ದು, ಅವರು ಕಾರ್ಯಕರ್ತರು, ಮುಖಂಡರ ಸಭೆ ನಡೆಸಿ ಕೆಪಿಸಿಸಿಗೆ ವರದಿ ನೀಡಲಿದ್ದಾರೆ. ವರದಿಯ ನಂತರ ಮುಂದಿನ ಪ್ರಕ್ರಿಯೆ ನಡೆಯಲಿದೆ. ನಾನು ಕೂಡ ಅವರೊಂದಿಗೆ ಮಾತನಾಡಿದ್ದು, ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular