alex Certify Shakti Scheme : ರಾಜ್ಯದಲ್ಲಿ ಶತಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ: ಇಂದು ಸರ್ಕಾರದಿಂದ ಸಂಭ್ರಮಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shakti Scheme : ರಾಜ್ಯದಲ್ಲಿ ಶತಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ: ಇಂದು ಸರ್ಕಾರದಿಂದ ಸಂಭ್ರಮಾಚರಣೆ

ರಾಜ್ಯ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿಯಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಣೆ ಮಾಡಿ, ಜೂನ್ 11 ರಂದು ಜಾರಿಗೆ ತಂದಿದ್ದು, ಇದುವರೆಗೂ 100 ಕೋಟಿಗೂ ಹೆಚ್ಚು ಮಂದಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ.

ಈ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಮೌಲ್ಯ 2397 ಕೋಟಿ ರೂ ಆಗಿದೆ. ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಬುಧವಾರಕ್ಕೆ 100 ಕೋಟಿ ದಾಟಿದೆ. ಯೋಜನೆ ಜಾರಿಯಾದಾಗಿನಿಂದಲೂ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು,ಇದೀಗ 100 ಕೋಟಿ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆದಿದ್ದಾರೆ.

ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟಿದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಶುಕ್ರವಾರ ಸಂಭ್ರಮಾಚರಣೆ ಏರ್ಪಡಿಸಲಾಗಿದ್ದು, ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಘಾತ ಮಾಡದೆ ಬಸ್ ಚಾಲನೆ ಮಾಡಿದ ನಾಲ್ಕೂ ನಿಗಮಗಳ ಚಾಲಕರಿಗೆ ಚಿನ್ನದ ಪದಕ ನೀಡಿ ಗೌರವಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಇಂದಿಗೆ ನಮ್ಮ ಸರ್ಕಾರದ ಶಕ್ತಿ ಯೋಜನೆಯಡಿ ನಾಡಿನ ಹೆಣ್ಣುಮಕ್ಕಳು 100 ಕೋಟಿ ಉಚಿತ ಪ್ರಯಾಣ ಬೆಳೆಸಿದ್ದಾರೆ. ಶಿಕ್ಷಣ, ಉದ್ಯೋಗ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಪ್ರಯಾಣ ಬೆಳೆಸುವ ಹೆಣ್ಣುಮಕ್ಕಳಿಗೆ ಈ ಯೋಜನೆ ವರದಾನವಾಗಿದೆ. ಯೋಜನೆ ಜಾರಿಯಾದ ನಂತರದ ಐದು ತಿಂಗಳ ಅವಧಿಯಲ್ಲಿ ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ ಮಂದಹಾಸ ಕಂಡಿದ್ದೇನೆ. ಯೋಜನೆಯೊಂದು ನಮ್ಮ ನಿರೀಕ್ಷೆಗೂ ಮೀರಿ ಅರ್ಹರನ್ನು ತಲುಪಿದಾಗ ಮೂಡುವ ಸಾರ್ಥಕ್ಯದ ಭಾವ ಈಗ ನನ್ನದಾಗಿದೆ ಎಂದು ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...